← Exodus (3/40) → |
1. | ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು. |
2. | ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ. |
3. | ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು. |
4. | ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು. |
5. | ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು. |
6. | ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು. |
7. | ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. |
8. | ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ. |
9. | ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ. |
10. | ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು. |
11. | ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು. |
12. | ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು. |
13. | ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು. |
14. | ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು. |
15. | ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು. |
16. | ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ. |
17. | ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು. |
18. | ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು. |
19. | ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ. |
20. | ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು. |
21. | ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ. |
22. | ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು. |
← Exodus (3/40) → |