← Exodus (30/40) → |
1. | ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. |
2. | ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. |
3. | ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. |
4. | ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. |
5. | ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. |
6. | ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. |
7. | ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. |
8. | ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. |
9. | ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. |
10. | ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು. |
11. | ಆಗ ಕರ್ತನು ಮಾತನಾಡಿ ಮೋಶೆಗೆ-- |
12. | ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು. |
13. | ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. |
14. | ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. |
15. | ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. |
16. | ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು. |
17. | ಕರ್ತನು ಮೋಶೆಗೆ-- |
18. | ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು. |
19. | ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. |
20. | ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು. |
21. | ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು. |
22. | ಇದಲ್ಲದೆ ಕರ್ತನು ಮೋಶೆಗೆ-- |
23. | ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, |
24. | ಐದುನೂರು ಶೆಕೆಲ್‌ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, |
25. | ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. |
26. | ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. |
27. | ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ |
28. | ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. |
29. | ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. |
30. | ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. |
31. | ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು. |
32. | ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. |
33. | ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು. |
34. | ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. |
35. | ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. |
36. | ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. |
37. | ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು. |
38. | ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು. |
← Exodus (30/40) → |