← Exodus (31/40) → |
1. | ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ-- |
2. | ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ. |
3. | ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. |
4. | ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ |
5. | ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು. |
6. | ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ. |
7. | ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ |
8. | ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ |
9. | ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ |
10. | ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ |
11. | ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು. |
12. | ಕರ್ತನು ಮೋಶೆಯೊಂದಿಗೆ ಮಾತನಾಡಿ-- |
13. | ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ. |
14. | ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು. |
15. | ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. |
16. | ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು. |
17. | ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು. |
18. | ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು. |
← Exodus (31/40) → |