← Exodus (34/40) → |
1. | ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು. |
2. | ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು. |
3. | ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು. |
4. | ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು. |
5. | ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. |
6. | ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ |
7. | ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು. |
8. | ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು. |
9. | ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು. |
10. | ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು. |
11. | ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ. |
12. | ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು. |
13. | ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು. |
14. | ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು. |
15. | ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. |
16. | ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು. |
17. | ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು. |
18. | ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ. |
19. | ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ. |
20. | ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು. |
21. | ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು. |
22. | ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು. |
23. | ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು. |
24. | ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು. |
25. | ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು. |
26. | ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು. |
27. | ಕರ್ತನು ಮೋಶೆಗೆ--ನೀನು ಈ ವಾಕ್ಯಗಳನ್ನು ಬರೆ; ಈ ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು. |
28. | ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು. |
29. | ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ. |
30. | ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು. |
31. | ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು. |
32. | ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು. |
33. | ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು. |
34. | ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು. |
35. | ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು. |
← Exodus (34/40) → |