← Exodus (40/40) |
1. | ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- |
2. | ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು. |
3. | ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು. |
4. | ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು. |
5. | ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು. |
6. | ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು. |
7. | ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು. |
8. | ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು. |
9. | ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು. |
10. | ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು. |
11. | ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು. |
12. | ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು. |
13. | ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು. |
14. | ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ |
15. | ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು. |
16. | ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು. |
17. | ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು. |
18. | ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು. |
19. | ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು. |
20. | ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. |
21. | ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು. |
22. | ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು. |
23. | ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು. |
24. | ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು. |
25. | ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು. |
26. | ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು. |
27. | ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು. |
28. | ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು. |
29. | ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು. |
30. | ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು. |
31. | ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು. |
32. | ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು. |
33. | ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು. |
34. | ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. |
35. | ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. |
36. | ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. |
37. | ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ, |
38. | ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು. |
← Exodus (40/40) |