← Ezekiel (23/48) → |
1. | ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- |
2. | ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; |
3. | ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು. |
4. | ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು. |
5. | ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, |
6. | ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು. |
7. | ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. |
8. | ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು. |
9. | ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; |
10. | ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು. |
11. | ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. |
12. | ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. |
13. | ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. |
14. | ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, |
15. | ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; |
16. | ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. |
17. | ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. |
18. | ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. |
19. | ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. |
20. | ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. |
21. | ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ. |
22. | ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. |
23. | ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. |
24. | ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. |
25. | ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. |
26. | ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು; |
27. | ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ. |
28. | ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ. |
29. | ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು. |
30. | ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ. |
31. | ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. |
32. | ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು. |
33. | ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ. |
34. | ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ. |
35. | ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು. |
36. | ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು. |
37. | ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. |
38. | ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. |
39. | ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ; |
40. | ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ. |
41. | ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು. |
42. | ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು. |
43. | ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ? |
44. | ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು. |
45. | ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ. |
46. | ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. |
47. | ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. |
48. | ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು. |
49. | ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ. |
← Ezekiel (23/48) → |