← Ezekiel (25/48) → |
1. | ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- |
2. | ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು; |
3. | ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ |
4. | ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು. |
5. | ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. |
6. | ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ |
7. | ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ. |
8. | ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು. |
9. | ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್‌ಯೆಷೀ ಮೋತ್ ಬಾಳ್‌ಮೆ ಯೋನ್ ಕಿರ್ಯಾಥಯಿಮ್ |
10. | ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು; |
11. | ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು. |
12. | ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. |
13. | ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. |
14. | ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ. |
15. | ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು. |
16. | ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ; |
17. | ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು. |
← Ezekiel (25/48) → |