← Ezekiel (27/48) → |
1. | ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- |
2. | ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು; |
3. | ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ. |
4. | ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ. |
5. | ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ. |
6. | ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ. |
7. | ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು. |
8. | ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು. |
9. | ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು. |
10. | ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು. |
11. | ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು. |
12. | ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. |
13. | ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು. |
14. | ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು. |
15. | ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. |
16. | ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. |
17. | ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು. |
18. | ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ |
19. | ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು. |
20. | ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. |
21. | ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. |
22. | ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. |
23. | ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು. |
24. | ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು. |
25. | ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ. |
26. | ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. |
27. | ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. |
28. | ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. |
29. | ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, |
30. | ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; |
31. | ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. |
32. | ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? |
33. | ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. |
34. | ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. |
35. | ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು. |
36. | ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. |
← Ezekiel (27/48) → |