← Ezekiel (3/48) → |
1. | ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು. |
2. | ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು. |
3. | ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು. |
4. | ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು. |
5. | ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ. |
6. | ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. |
7. | ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ. |
8. | ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ. |
9. | ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ. |
10. | ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. |
11. | ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು. |
12. | ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು. |
13. | ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು. |
14. | ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು. |
15. | ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು. |
16. | ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು -- |
17. | ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. |
18. | ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. |
19. | ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. |
20. | ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು; |
21. | ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ. |
22. | ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು. |
23. | ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು. |
24. | ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ. |
25. | ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ. |
26. | ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ. |
27. | ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ. |
← Ezekiel (3/48) → |