← Ezekiel (31/48) → |
1. | ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- |
2. | ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ? |
3. | ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. |
4. | ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. |
5. | ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. |
6. | ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. |
7. | ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. |
8. | ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. |
9. | ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. |
10. | ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ. |
11. | ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ. |
12. | ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು. |
13. | ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು; |
14. | ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು. |
15. | ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು. |
16. | ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು. |
17. | ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು; |
18. | ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ. |
← Ezekiel (31/48) → |