← Ezekiel (34/48) → |
1. | ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- |
2. | ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ? |
3. | ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ, |
4. | ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. |
5. | ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು. |
6. | ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ. |
7. | ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. |
8. | ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ |
9. | ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. |
10. | ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ. |
11. | ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ. |
12. | ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು. |
13. | ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. |
14. | ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು. |
15. | ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. |
16. | ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು. |
17. | ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು. |
18. | ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ? |
19. | ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು. |
20. | ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ. |
21. | ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ. |
22. | ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು. |
23. | ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. |
24. | ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ; |
25. | ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. |
26. | ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; |
27. | ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು; |
28. | ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು. |
29. | ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ. |
30. | ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ. |
31. | ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ. |
← Ezekiel (34/48) → |