← Ezekiel (40/48) → |
1. | ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು. |
2. | ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು. |
3. | ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು. |
4. | ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು. |
5. | ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು. |
6. | ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು. |
7. | ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು. |
8. | ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು. |
9. | ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು. |
10. | ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು. |
11. | ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು. |
12. | ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು. |
13. | ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು. |
14. | ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು. |
15. | ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು. |
16. | ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು. |
17. | ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು. |
18. | ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು. |
19. | ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು. |
20. | ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು. |
21. | ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ. |
22. | ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು. |
23. | ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು. |
24. | ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು. |
25. | ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ; |
26. | ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು. |
27. | ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು. |
28. | ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು; |
29. | ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ; |
30. | ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು. |
31. | ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು. |
32. | ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು. |
33. | ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ. |
34. | ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು. |
35. | ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು; |
36. | ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ; |
37. | ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು. |
38. | ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು; |
39. | ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು. |
40. | ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು. |
41. | ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು. |
42. | ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು. |
43. | ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು. |
44. | ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು. |
45. | ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು. |
46. | ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ. |
47. | ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು. |
48. | ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು. |
49. | ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು. |
← Ezekiel (40/48) → |