← Ezekiel (41/48) → |
1. | ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು. |
2. | ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು. |
3. | ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು. |
4. | ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು. |
5. | ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು. |
6. | ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ. |
7. | ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು. |
8. | ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು. |
9. | ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು. |
10. | ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು; |
11. | ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು. |
12. | ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು. |
13. | ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು; |
14. | ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. |
15. | ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು; |
16. | ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ; |
17. | ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು. |
18. | ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ. |
19. | ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು. |
20. | ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು. |
21. | ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು. |
22. | ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು. |
23. | ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು. |
24. | ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು. |
25. | ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು. |
26. | ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು. |
← Ezekiel (41/48) → |