← Ezekiel (42/48) → |
1. | ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು, |
2. | ನೂರುಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಲಿನ ಅಗಲ ಐವತ್ತು ಮೊಳವಾಗಿತ್ತು. |
3. | ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು. |
4. | ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು. |
5. | ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು. |
6. | ಇವು ಮೂರು ಅಂತಸ್ತು ಗಳಾಗಿದ್ದವು; ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ; ಆದದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗೆ ಚಾಚಿಕೊಂಡಿದ್ದವು. |
7. | ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು. |
8. | ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿ ದೇವಾಲಯದ ಮುಂದೆ ನೂರು ಮೊಳವಿತ್ತು. |
9. | ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು. |
10. | ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು. |
11. | ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು. |
12. | ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು. |
13. | ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು. |
14. | ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು. |
15. | ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು. |
16. | ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು. |
17. | ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು. |
18. | ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು. |
19. | ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಐನೂರು ಕೋಲೆಂದು ಅಳೆದನು. |
20. | ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು. |
← Ezekiel (42/48) → |