← Ezra (7/10) → |
1. | ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು, |
2. | ಇವನು ಹಿಲ್ಕೀಯನ ಮಗನು, ಇವನು ಶಲ್ಲೂಮನ ಮಗನು, ಇವನು ಚಾದೋಕನ ಮಗನು, ಇವನು ಅಹೀಟೂಬನ ಮಗನು, |
3. | ಇವನು ಅಮ ರ್ಯನ ಮಗನು, ಇವನು ಅಜರ್ಯನ ಮಗನು, |
4. | ಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು, |
5. | ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು. |
6. | ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು. |
7. | ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು. |
8. | ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು. |
9. | ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು. |
10. | ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು. |
11. | ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ-- |
12. | ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ. |
13. | ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ. |
14. | ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ |
15. | ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ |
16. | ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ |
17. | ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ. |
18. | ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ. |
19. | ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು. |
20. | ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು. |
21. | ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ-- |
22. | ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ. |
23. | ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು? |
24. | ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ. |
25. | ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು. |
26. | ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು. |
27. | ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ. |
28. | ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು. |
← Ezra (7/10) → |