← Galatians (3/6) → |
1. | ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ? |
2. | ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ? |
3. | ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ? |
4. | ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ? |
5. | ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ? |
6. | ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು. |
7. | ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ. |
8. | ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ. |
9. | ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ. |
10. | ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. |
11. | ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. |
12. | ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. |
13. | ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ. |
14. | ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು. |
15. | ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ. |
16. | ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ. |
17. | ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ. |
18. | ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ. |
19. | ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. |
20. | ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ. |
21. | ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು. |
22. | ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. |
23. | ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. |
24. | ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು. |
25. | ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ. |
26. | ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. |
27. | ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. |
28. | ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ. |
29. | ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. |
← Galatians (3/6) → |