← Galatians (6/6) |
1. | ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. |
2. | ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ. |
3. | ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ. |
4. | ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ; |
5. | ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು. |
6. | ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ. |
7. | ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. |
8. | ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. |
9. | ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು. |
10. | ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ. |
11. | ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ. |
12. | ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ. |
13. | ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. |
14. | ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. |
15. | ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು. |
16. | ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ. |
17. | ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ. |
18. | ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್. |
← Galatians (6/6) |