Genesis (1/50) → |
1. | ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. |
2. | ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು. |
3. | ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು. |
4. | ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು. |
5. | ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು. |
6. | ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು. |
7. | ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು. |
8. | ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು. |
9. | ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು. |
10. | ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. |
11. | ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು. |
12. | ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು. |
13. | ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೂರನೆಯ ದಿನವಾಯಿತು. |
14. | ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ; |
15. | ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು. |
16. | ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು. |
17. | ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು. |
18. | ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. |
19. | ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು. |
20. | ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು. |
21. | ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. |
22. | ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು. |
23. | ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು. |
24. | ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು. |
25. | ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. |
26. | ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು. |
27. | ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು. |
28. | ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು. |
29. | ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು. |
30. | ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು. |
31. | ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು. |
Genesis (1/50) → |