← Genesis (10/50) → |
1. | ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. |
2. | ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು. |
3. | ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು. |
4. | ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ. |
5. | ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು. |
6. | ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು. |
7. | ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು. |
8. | ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು. |
9. | ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು. |
10. | ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು. |
11. | ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ, |
12. | ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್‌ನನ್ನು ಕಟ್ಟಿದನು. |
13. | ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ |
14. | ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು. |
15. | ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ |
16. | ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ |
17. | ಹಿವ್ವಿಯನೂ ಅರ್ಕಿಯನೂ ಸೀನಿಯನೂ |
18. | ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು. |
19. | ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ. |
20. | ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು. |
21. | ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು. |
22. | ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್. |
23. | ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ. |
24. | ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು. |
25. | ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್. |
26. | ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ |
27. | ಹದೋರಾಮನೂ ಊಜಾಲನೂ ದಿಕ್ಲಾನನೂ |
28. | ಓಬಾಲನೂ ಅಬೀಮಯೇಲನೂ ಶೆಬನೂ |
29. | ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು. |
30. | ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು. |
31. | ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು. |
32. | ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು. |
← Genesis (10/50) → |