← Genesis (12/50) → |
1. | ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. |
2. | ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. |
3. | ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು. |
4. | ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು. |
5. | ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು. |
6. | ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು. |
7. | ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು. |
8. | ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು. |
9. | ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು. |
10. | ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು. |
11. | ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ. |
12. | ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು. |
13. | ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು. |
14. | ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು. |
15. | ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು. |
16. | ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು. |
17. | ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು. |
18. | ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ? |
19. | ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು. |
20. | ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು. |
← Genesis (12/50) → |