← Genesis (17/50) → |
1. | ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು. |
2. | ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು. |
3. | ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ-- |
4. | ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ. |
5. | ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ. |
6. | ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು. |
7. | ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. |
8. | ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು. |
9. | ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು. |
10. | ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು. |
11. | ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು. |
12. | ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ |
13. | ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು. |
14. | ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು. |
15. | ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ. |
16. | ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು. |
17. | ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು. |
18. | ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು. |
19. | ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು. |
20. | ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು. |
21. | ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು. |
22. | ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು. |
23. | ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು. |
24. | ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು. |
25. | ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು. |
26. | ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು. |
27. | ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು. |
← Genesis (17/50) → |