← Genesis (21/50) → |
1. | ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು. |
2. | ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. |
3. | ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು. |
4. | ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು. |
5. | ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು. |
6. | ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ-- |
7. | ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು. |
8. | ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. |
9. | ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ |
10. | ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು. |
11. | ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು. |
12. | ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು. |
13. | ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು. |
14. | ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು. |
15. | ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ |
16. | ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು. |
17. | ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ. |
18. | ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು. |
19. | ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು. |
20. | ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು. |
21. | ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು. |
22. | ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ. |
23. | ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು. |
24. | ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು. |
25. | ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ |
26. | ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು. |
27. | ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. |
28. | ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು. |
29. | ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು. |
30. | ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು. |
31. | ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು. |
32. | ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು. |
33. | ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು. |
34. | ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು. |
← Genesis (21/50) → |