← Genesis (29/50) → |
1. | ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು. |
2. | ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು. |
3. | ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು. |
4. | ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು. |
5. | ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು. |
6. | ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು. |
7. | ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು. |
8. | ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು. |
9. | ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು. |
10. | ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು. |
11. | ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು. |
12. | ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು. |
13. | ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು. |
14. | ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು. |
15. | ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು. |
16. | ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು. |
17. | ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು. |
18. | ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು. |
19. | ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು. |
20. | ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು. |
21. | ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು. |
22. | ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು. |
23. | ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು. |
24. | ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು. |
25. | ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು. |
26. | ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ. |
27. | ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು. |
28. | ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು. |
29. | ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು. |
30. | ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು. |
31. | ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು. |
32. | ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು. |
33. | ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. |
34. | ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು. |
35. | ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು. |
← Genesis (29/50) → |