← Genesis (32/50) → |
1. | ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು. |
2. | ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು. |
3. | ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು. |
4. | ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು; |
5. | ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು. |
6. | ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು. |
7. | ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು. |
8. | ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು. |
9. | ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ, |
10. | ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು. |
11. | ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ. |
12. | ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು. |
13. | ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು. |
14. | ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು; |
15. | ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು; |
16. | ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು. |
17. | ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ |
18. | ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು. |
19. | ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು. |
20. | ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು. |
21. | ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು. |
22. | ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು. |
23. | ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು. |
24. | ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. |
25. | ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. |
26. | ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. |
27. | ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. |
28. | ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು. |
29. | ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು. |
30. | ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು. |
31. | ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು. |
32. | ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ. |
← Genesis (32/50) → |