← Genesis (43/50) → |
1. | ದೇಶದಲ್ಲಿ ಬರವು ಘೋರವಾಗಿತ್ತು. |
2. | ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು. |
3. | ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ. |
4. | ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ. |
5. | ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು. |
6. | ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ |
7. | ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು. |
8. | ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು. |
9. | ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು. |
10. | ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು. |
11. | ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. |
12. | ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು. |
13. | ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ. |
14. | ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು. |
15. | ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು. |
16. | ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು. |
17. | ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು. |
18. | ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು. |
19. | ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ-- |
20. | ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ. |
21. | ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ. |
22. | ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು. |
23. | ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು. |
24. | ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು. |
25. | ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು. |
26. | ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು. |
27. | ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು. |
28. | ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು. |
29. | ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು. |
30. | ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. |
31. | ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು. |
32. | ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು. |
33. | ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು. |
34. | ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು. |
← Genesis (43/50) → |