← Genesis (49/50) → |
1. | ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ. |
2. | ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ. |
3. | ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. |
4. | ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ; |
5. | ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. |
6. | ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. |
7. | ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು. |
8. | ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. |
9. | ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? |
10. | ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. |
11. | ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. |
12. | ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು. |
13. | ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು. |
14. | ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ. |
15. | ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು. |
16. | ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. |
17. | ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು. |
18. | ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ. |
19. | ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು. |
20. | ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು. |
21. | ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ. |
22. | ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ. |
23. | ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು. |
24. | ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ, |
25. | ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.) |
26. | ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ. |
27. | ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು. |
28. | ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು. |
29. | ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ |
30. | ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. |
31. | ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು. |
32. | ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು. |
33. | ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. |
← Genesis (49/50) → |