← Genesis (6/50) → |
1. | ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು. |
2. | ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು. |
3. | ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು. |
4. | ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು. |
5. | ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು. |
6. | ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು. |
7. | ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು. |
8. | ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು. |
9. | ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು. |
10. | ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು. |
11. | ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು. |
12. | ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು. |
13. | ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು. |
14. | ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು. |
15. | ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು. |
16. | ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು. |
17. | ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು. |
18. | ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು. |
19. | ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು. |
20. | ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು. |
21. | ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು. |
22. | ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು. |
← Genesis (6/50) → |