← Genesis (9/50) → |
1. | ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. |
2. | ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ. |
3. | ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ. |
4. | ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು. |
5. | ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು. |
6. | ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು. |
7. | ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು. |
8. | ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ-- |
9. | ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ |
10. | ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ |
11. | ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ. |
12. | ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು. |
13. | ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು. |
14. | ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು. |
15. | ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ. |
16. | ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು. |
17. | ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು. |
18. | ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು. |
19. | ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು. |
20. | ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು. |
21. | ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು. |
22. | ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು. |
23. | ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ. |
24. | ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು-- |
25. | ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- |
26. | ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ. |
27. | ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು. |
28. | ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು. |
29. | ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು. |
← Genesis (9/50) → |