← Hebrews (6/13) → |
1. | ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ |
2. | ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ. |
3. | ದೇವರ ಚಿತ್ತವಾದರೆ ಹೀಗೆ ಮಾಡುವೆವು. |
4. | ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ |
5. | ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ |
6. | ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ. |
7. | ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; |
8. | ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ. |
9. | ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ. |
10. | ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ. |
11. | ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ. |
12. | ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ. |
13. | ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- |
14. | ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. |
15. | ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. |
16. | ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. |
17. | ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. |
18. | ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು. |
19. | ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು. |
20. | ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ. |
← Hebrews (6/13) → |