← Hosea (2/14) → |
1. | ನೀವು ನಿಮ್ಮ ಸಹೋದರರಿಗೆ ಅಮ್ಮಿ ಎಂದೂ ನಿಮ್ಮ ಸಹೋದರಿಯರಿಗೆ ರುಹಾಮ ಎಂದೂ ಹೇಳಿರಿ. |
2. | ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ. |
3. | ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ. |
4. | ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ, |
5. | ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ. |
6. | ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು. |
7. | ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು. |
8. | ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ. |
9. | ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು. |
10. | ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು. |
11. | ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು. |
12. | ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು. |
13. | ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ. |
14. | ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು. |
15. | ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು. |
16. | ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ. |
17. | ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ. |
18. | ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು. |
19. | ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು. |
20. | ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ. |
21. | ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು. |
22. | ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು. |
23. | ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. |
← Hosea (2/14) → |