← Hosea (3/14) → |
1. | ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು |
2. | ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು. |
3. | ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. |
4. | ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು. |
5. | ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. |
← Hosea (3/14) → |