← Hosea (5/14) → |
1. | ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ. |
2. | ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ. |
3. | ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು. |
4. | ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ. |
5. | ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ. ಆದದರಿಂದ ಇಸ್ರಾಯೇಲು ಮತ್ತು ಎಫ್ರಾಯಾಮು ತಮ್ಮ ಕೆಟ್ಟ ತನದಲ್ಲಿ ಬೀಳುವವು. ಯೆಹೂದವು ಅವರೊಂದಿಗೆ ಬೀಳುವದು. |
6. | ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ. |
7. | ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು. |
8. | ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು; |
9. | ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ. |
10. | ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು. |
11. | ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು. |
12. | ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು. |
13. | ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ. |
14. | ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು. |
15. | ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು. |
← Hosea (5/14) → |