← Isaiah (14/66) → |
1. | ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು. |
2. | ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು. |
3. | ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು. |
4. | ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. |
5. | ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ |
6. | ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು. |
7. | ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ. |
8. | ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. |
9. | ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ. |
10. | ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು. |
11. | ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ; |
12. | ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? |
13. | ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. |
14. | ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; |
15. | ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. |
16. | ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ |
17. | ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು. |
18. | ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ. |
19. | ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ. |
20. | ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. |
21. | ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. |
22. | ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. |
23. | ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. |
24. | ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು. |
25. | ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು. |
26. | ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. |
27. | ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ. |
28. | ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು. |
29. | ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ. |
30. | ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು. |
31. | ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ. |
32. | ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ. |
← Isaiah (14/66) → |