← Isaiah (16/66) → |
1. | ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ. |
2. | ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು. |
3. | ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ. |
4. | ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು. |
5. | ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು. |
6. | ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ. |
7. | ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ. |
8. | ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. |
9. | ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು. |
10. | ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ. |
11. | ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು. |
12. | ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು. |
13. | ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ. |
14. | ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ. |
← Isaiah (16/66) → |