← Isaiah (17/66) → |
1. | ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು. |
2. | ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು. |
3. | ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. |
4. | ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು. |
5. | ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು. |
6. | ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ. |
7. | ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು. |
8. | ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು. |
9. | ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು. |
10. | ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ. |
11. | ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ. |
12. | ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ! |
13. | ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. |
14. | ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ. |
← Isaiah (17/66) → |