← Isaiah (2/66) → |
1. | ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ: |
2. | ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. |
3. | ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. |
4. | ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ. |
5. | ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ. |
6. | ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ. |
7. | ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ. |
8. | ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು. |
9. | ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ. |
10. | ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ. |
11. | ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. |
12. | ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು. |
13. | ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ |
14. | ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ |
15. | ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ |
16. | ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. |
17. | ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು. |
18. | ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು. |
19. | ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು. |
20. | ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು. |
21. | ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು. |
22. | ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು? |
← Isaiah (2/66) → |