← Isaiah (21/66) → |
1. | ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ. |
2. | ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. |
3. | ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. |
4. | ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. |
5. | ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ. |
6. | ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ. |
7. | ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ. |
8. | ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. |
9. | ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು. |
10. | ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ. |
11. | ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು? |
12. | ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು. |
13. | ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ. |
14. | ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ. |
15. | ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ. |
16. | ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು. |
17. | ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ. |
← Isaiah (21/66) → |