← Isaiah (25/66) → |
1. | ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು. |
2. | ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ. |
3. | ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು. |
4. | ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ. |
5. | ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ. |
6. | ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು. |
7. | ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು. |
8. | ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ. |
9. | ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು. |
10. | ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು. |
11. | ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು. |
12. | ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು. |
← Isaiah (25/66) → |