← Isaiah (45/66) → |
1. | ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- |
2. | ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. |
3. | ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು. |
4. | ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ. |
5. | ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು. |
6. | ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ. |
7. | ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ. |
8. | ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ. |
9. | ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ? |
10. | ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ. |
11. | ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ? |
12. | ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು. |
13. | ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. |
14. | ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ. |
15. | ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ. |
16. | ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು. |
17. | ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ. |
18. | ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ. |
19. | ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ. |
20. | ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ. |
21. | ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ. |
22. | ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. |
23. | ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. |
24. | ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ. |
25. | ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. |
← Isaiah (45/66) → |