← Isaiah (54/66) → |
1. | ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ. |
2. | ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು. |
3. | ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು. |
4. | ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ. |
5. | ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು. |
6. | ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. |
7. | ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. |
8. | ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. |
9. | ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. |
10. | ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ. |
11. | ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. |
12. | ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು. |
13. | ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು. |
14. | ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು. |
15. | ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು. |
16. | ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ. |
17. | ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ. |
← Isaiah (54/66) → |