← Isaiah (55/66) → |
1. | ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. |
2. | ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! |
3. | ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು. |
4. | ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು. |
5. | ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು. |
6. | ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. |
7. | ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು. |
8. | ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. |
9. | ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ. |
10. | ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, |
11. | ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು. |
12. | ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು. |
13. | ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. |
← Isaiah (55/66) → |