← Isaiah (57/66) → |
1. | ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. |
2. | ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ. |
3. | ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ. |
4. | ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ? |
5. | ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ? |
6. | ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ? |
7. | ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ. |
8. | ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ. |
9. | ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ. |
10. | ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ. |
11. | ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ? |
12. | ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ. |
13. | ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು. |
14. | ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು. |
15. | ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ. |
16. | ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು. |
17. | ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ. |
18. | ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು. |
19. | ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ. |
20. | ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ. |
21. | ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ. |
← Isaiah (57/66) → |