← Isaiah (61/66) → |
1. | ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ |
2. | ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ |
3. | ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು. |
4. | ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು. |
5. | ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು. |
6. | ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ. |
7. | ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು. |
8. | ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. |
9. | ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು. |
10. | ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ. |
11. | ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು. |
← Isaiah (61/66) → |