← Isaiah (7/66) → |
1. | ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. |
2. | ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. |
3. | ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- |
4. | ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. |
5. | ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, |
6. | ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು |
7. | ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. |
8. | ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. |
9. | ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ. |
10. | ಇದಲ್ಲದೆ ಕರ್ತನು ಆಹಾಜನಿಗೆ -- |
11. | ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು. |
12. | ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು. |
13. | ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? |
14. | ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು. |
15. | ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು. |
16. | ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು. |
17. | ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು. |
18. | ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು. |
19. | ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು. |
20. | ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು. |
21. | ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು. |
22. | ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು. |
23. | ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು. |
24. | ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು. |
25. | ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು. |
← Isaiah (7/66) → |