← Isaiah (8/66) → |
1. | ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು. |
2. | ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು. |
3. | ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು. |
4. | ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು. |
5. | ಕರ್ತನು ಮತ್ತೊಂದಾವರ್ತಿ ನನಗೆ-- |
6. | ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ |
7. | ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ |
8. | ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು. |
9. | ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. |
10. | ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ. |
11. | ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ-- |
12. | ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ. |
13. | ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ. |
14. | ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. |
15. | ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು. |
16. | ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು. |
17. | ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು. |
18. | ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ. |
19. | ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ? |
20. | ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ. |
21. | ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು. |
22. | ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು. |
← Isaiah (8/66) → |