← Isaiah (9/66) → |
1. | ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ. |
2. | ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ. |
3. | ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು. |
4. | ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ. |
5. | ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು. |
6. | ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. |
7. | ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು. |
8. | ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು. |
9. | ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು; |
10. | ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು. |
11. | ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು. |
12. | ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ. |
13. | ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ. |
14. | ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. |
15. | ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು. |
16. | ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ. |
17. | ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ. |
18. | ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ. |
19. | ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ. |
20. | ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು. |
21. | ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು. |
← Isaiah (9/66) → |