← James (4/5) → |
1. | ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. |
2. | ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. |
3. | ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. |
4. | ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ. |
5. | ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? |
6. | ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ. |
7. | ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. |
8. | ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. |
9. | ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. |
10. | ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು. |
11. | ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ |
12. | ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು? |
13. | ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. |
14. | ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. |
15. | ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು. |
16. | ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ. |
17. | ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ. |
← James (4/5) → |