Jeremiah (1/52) → |
1. | ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು. |
2. | ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು. |
3. | ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು. |
4. | ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ |
5. | ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು. |
6. | ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು. |
7. | ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು. |
8. | ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು. |
9. | ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ. |
10. | ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು. |
11. | ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು. |
12. | ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು. |
13. | ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು. |
14. | ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು. |
15. | ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು. |
16. | ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು. |
17. | ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. |
18. | ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ. |
19. | ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ. |
Jeremiah (1/52) → |