← Jeremiah (14/52) → |
1. | ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. |
2. | ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. |
3. | ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. |
4. | ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. |
5. | ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; |
6. | ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ. |
7. | ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ. |
8. | ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು? |
9. | ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ. |
10. | ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು. |
11. | ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ; |
12. | ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು. |
13. | ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. |
14. | ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. |
15. | ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. |
16. | ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು. |
17. | ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು. |
18. | ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು. |
19. | ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ! |
20. | ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ. |
21. | ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ. |
22. | ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ. |
← Jeremiah (14/52) → |