← Jeremiah (18/52) → |
1. | ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ-- |
2. | ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ. |
3. | ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು. |
4. | ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು. |
5. | ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- |
6. | ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ. |
7. | ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ |
8. | ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. |
9. | ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ |
10. | ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು. |
11. | ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು. |
12. | ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು. |
13. | ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ. |
14. | ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ? |
15. | ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ. |
16. | ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು. |
17. | ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು. |
18. | ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು. |
19. | ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು. |
20. | ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ. |
21. | ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ. |
22. | ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ. |
23. | ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು. |
← Jeremiah (18/52) → |